ದರ್ಬೆ ಲಿಟ್ಲ್ ಫ್ಲವರ್ ಶಾಲೆಯಲ್ಲಿ – ವನಮಹೋತ್ಸವ ಆಚರಣೆ

ದರ್ಬೆ ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ  ಶಾಲಾ ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ನೇತೃತ್ವದಲ್ಲಿ ವನಮಹೋತ್ಸವ ಅರಣ್ಯ ಹಬ್ಬ ಕಾರ್ಯಕ್ರಮ ವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ವೆನಿಶಾ ಬಿ.ಎಸ್. ವಹಿಸಿದ್ದರು.ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಅರಣ್ಯ ಸಂಚಾರಿ ದಳ ಮಂಗಳೂರು ಇಲ್ಲಿನ ವಲಯ ಅರಣ್ಯಧಿಕಾರಿಗಳು ಶ್ರೀ ಸಂತೋಷ ಕುಮಾರ್ ರೈ ಕೆ ಮಾತನಾಡಿ ಈ ಸೃಷ್ಟಿಯೇ ಅದ್ಭುತ ಪ್ರಕೃತಿಯ ಬಗ್ಗೆ ಆಳವಾಗಿ ಅಧ್ಯಯನ ಮಾಡಿದ್ದೆ ಆದ್ರೆ ಅದರ ಅಂತರ್ ಸತ್ವ ನಮಗೆ ತಿಳಿಯತ್ತೆ ಈ ಪ್ರಕೃತಿಯನ್ನು ನೈಜವಾಗಿ ಇರಲು ಬಿಡಿ ಅದರ ಮೇಲೆ ನಮ್ಮ ಪ್ರಯೋಗ ಕಡಿಮೆ ಆಗ್ಲಿ ಎಂದರು. ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ಹಾಡಿನ ಮೂಲಕ ಜಾಗೃತಿ ಮೂಡಿಸಿದರು ವೇದಿಕೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರಾದ ವಿನಯ ಸುವರ್ಣ, ಸುರಕ್ಷಾ ಸಮಿತಿ ಅಧ್ಯಕ್ಷ ರಾದ ಚೇತನ್, ಹಿರಿಯ ಶಿಕ್ಷಕಿ ಗೈಡ್ ಕ್ಯಾಪ್ಟನ್ ವಿಲ್ಮಾ ಫೆರ್ನಾಂಡಿಸ್ ಹಾಗೂ ಸ್ಕೌಟ್ ಶಿಕ್ಷಕ ಬಾಲಕೃಷ್ಣ ರೈ ಪೊರ್ದಾಲ್ ಉಪಸ್ಥಿತರಿದ್ದರು.

ಶಿಕ್ಷಕಿ ನಳಿನಾಕ್ಷಿ ಸ್ವಾಗತಿಸಿ, ಬಾಲಕೃಷ್ಣ ರೈ ಪೊರ್ದಾಲ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.ಸುಮಾರು 500 ಸ್ಕೌಟ್, ಗೈಡ್, ಕಬ್ ಮತ್ತು ಬುಲ್ ಬುಲ್ ಮಕ್ಕಳು ಭಾಗವಹಿಸಿದರು.ಬಳಿಕ ಗಿಡ ನೆಡುವ ಕಾರ್ಯಕ್ರಮ ನೆರವೇರಿತು

Leave a Reply

Your email address will not be published. Required fields are marked *